siachen glacier; source |
ಇದು
ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ. ಸಮುದ್ರಮಟ್ಟದಿಂದ ಅಜಮಾಸು 5,753 ಮೀ ಎತ್ತರದಲ್ಲಿರುವ ಹಿಮಚ್ಛಾದಿತ
ರಣರಂಗ. ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಸಂಕೇತ. 1984ರಿಂದ ಇಲ್ಲಿಯವರೆಗೆ ಪಾಕಿಸ್ತಾನದ
ಮೂರು ಸಾವಿರ ಮತ್ತು ಭಾರತದ ಐದು ಸಾವಿರಕ್ಕೂ ಹೆಚ್ಚು ಸೈನಿಕರು ಇಲ್ಲಿ ಹತರಾಗಿದ್ದಾರೆ [ಅನಧಿಕೃತ
ವರದಿ; ಅಧಿಕೃತ ವರದಿಯನ್ನು ಎರಡೂ ದೇಶದ ಸರಕಾರಗಳು ಬಹಿರಂಗಗೊಳಿಸುವುದಿಲ್ಲ]. ಬಹಳಷ್ಟು ಮಂದಿಯ ದೇಹವನ್ನು
ಇನ್ನೂ ಪತ್ತೆ ಹಚ್ಚಲಾಗಿಲ್ಲ. 80%ಗಿಂತ ಹೆಚ್ಚು ಸಂಖ್ಯೆಯ ಸೈನಿಕರ ಮರಣಕ್ಕೆ ಕಾರಣವಾಗಿದ್ದು ಎದುರಾಳಿಗಳ
ಬಂದೂಕಾಗಲೀ, ಆಧುನಿಕ ಕ್ಷಿಪಣಿಗಳಾಗಲೀ ಅಲ್ಲ. ದೇಶಗಡಿಗಳ ಲೆಕ್ಕಿಸದೆ ಈ ಸೈನಿಕರನ್ನು ಬಲಿ ತೆಗೆದುಕೊಂಡಿರುವುದು
ಪ್ರಕೃತಿ! ಪ್ರಕೃತಿಯ ಪ್ರಮುಖಾಯುಧ ಹಿಮ!! ಇದು ಸಿಯಾಚಿನ್ ಯುದ್ಧಭೂಮಿ.