ಡಾ ಅಶೋಕ್ ಕೆ ಆರ್
ತೀರ ಗಂಗಾಧರ್ ಮೊದಲಿಯಾರ್ ಕೂಡ ಈ ರೀತಿಯಾಗಿ ಬರೆಯಬಲ್ಲರು
ಎಂದು ನಿರೀಕ್ಷಿಸಿರಲಿಲ್ಲ! ಪ್ರಜಾವಾಣಿಯ ಸಿನಿಮಾರಂಜನೆಯ ಫಿಲಂ ಡೈರಿ ಅಂಕಣದಲ್ಲಿ ಅಮೀರ್ ಖಾನನ ಸತ್ಯಮೇವ
ಜಯತೆಯ ಬಗ್ಗೆ ಬರೆದಿದ್ದಾರೆ. ‘ಬುರುಡೆ ಪುರಾಣ’ ಎಂಬ ಶೀರ್ಷಿಕೆಯೇ ಅಸಂಬದ್ಧವಾಗಿದೆ. ಅಮೀರ್ ಖಾನನ
ಕೆಲಸವನ್ನು ಮೆಚ್ಚುತ್ತಲೇ ಅವನನ್ನು ತೆಗಳುತ್ತಾ ಹೋಗುತ್ತಾರೆ. ಭಾವನೆಗಳನ್ನು ಉದ್ರಿಕ್ತಗೊಳಿಸಿ ಹಣ
ಮಾಡುವ ‘ದಂಧೆ’ ಎಂದುಬಿಡುತ್ತಾರೆ. ಅಮೀರ್ ಖಾನ್ ಹೋರಾಟಗಾರನಲ್ಲ, ಸಾಮಾಜಿಕ ಕಾರ್ಯಕರ್ತನೂ ಅಲ್ಲ;
ಆತ ಒಬ್ಬ ನಟ, ನಿರ್ಮಾಪಕ, ನಿರ್ದೇಶಕ. ಹಣವಿಲ್ಲದೆ ಏನೂ ಮಾಡಲಾಗದ ಚಿತ್ರರಂಗದವನು. ಯಾವ ಕಾರ್ಯಕ್ರಮ
ಮಾಡಿದರೂ ಅದರಿಂದ ಲಾಭ ಬರುವುದನ್ನು ಅವನು ಗಮನಿಸಲೇಬೇಕು. ‘ಏರ್ ಟೆಲ್ನಿಂದ ಮೇಸೇಜ್ ಮಾಡಿ, ಕೇವಲ
ಒಂದು ರುಪಾಯಿ’ ಎಂದವನು ಕಾರ್ಯಕ್ರಮದ ಕೊನೆಯಲ್ಲಿ ಹೇಳುವುದು ಕೂಡ ಲಾಭದ ಒಂದು ಮುಖ. ಇವೆಲ್ಲವೂ ಸತ್ಯವೇ,
ಆದರೆ....