ಡಾ
ಅಶೋಕ್ ಕೆ ಆರ್
ಪ್ರವಾಸಕಥನವೆಂದರೆ ಭೇಟಿ ನೀಡಿದ ತಾಣಗಳ ಮಾಹಿತಿ, ಆ ಜಾಗಕ್ಕೆ ಹೋಗಲಿರುವ
ಸಾರಿಗೆ ವ್ಯವಸ್ಥೆಯ ಬಗೆಗಿನ ಮಾಹಿತಿ, ಅಲ್ಲಿ ಸಿಗುವ ವಿಧವಿಧದ ಭೋಜನಗಳ ಮಾಹಿತಿ, ಅಬ್ಬಬ್ಬಾ ಎಂದರೆ
ಆ ಸ್ಥಳದ ಪೂರ್ವೇತಿಹಾಸದ ಮಾಹಿತಿ – ಇವು ಸಿದ್ಧರೂಪದ ಬಹುತೇಕ ಪ್ರವಾಸಕಥನಗಳ ಹೂರಣ. ಈ ಸಿದ್ಧ ರೂಪವನ್ನು
ಹೊರತುಪಡಿಸಿದ ಪ್ರವಾಸಕಥನಗಳೂ ಉಂಟು, ಅವು ಆತ್ಮರತಿಯೊಡನೆ ತಮ್ಮದೇ ಸ್ವಂತ ಸಂಗತಿಗಳನ್ನು, ಸಣ್ಣಪುಟ್ಟ
ಸಮಸ್ಯೆಗಳನ್ನು ವೈಭವೀಕರಿಸಿಕೊಂಡು ಬರೆಯಲ್ಪಟ್ಟ ಹೆಸರಿಗಷ್ಟೇ ಪ್ರವಾಸಕಥನವೆನ್ನಿಸಿಕೊಳ್ಳುವ ಬರವಣಿಗೆಗಳು.
ಇವೆಲ್ಲ ರೀತಿಯ ಪ್ರವಾಸಕಥನಗಳು ನಾಚುವಂತೆ ಇರುವ ಪುಸ್ತಕ “ನೈನ್ ಲೈಫ್ಸ್” (Nine Lives).