ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ
ಕೃಷಿಕ್ಷೇತ್ರ ತೀವ್ರವಾದ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಸದರಿ ಬಿಕ್ಕಟ್ಟುಗಳಿಗೆ ಕಾರಣವಾದ ಅಂಶಗಳನ್ನು ವೈಜ್ಞಾನಿಕವಾಗಿ ಅದ್ಯಯನ ಮಾಡಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾದ ಸರಕಾರಗಳು ತಮ್ಮ ಖಾಸಗೀಕರಣದ ನೀತಿಯನ್ನುಕೃಷಿಕ್ಷೇತ್ರಕ್ಕೂ ಅನ್ವಯಿಸುವ ಭರದಲ್ಲಿ, ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸಲು ಹೊರಟಿರುವಂತೆ ಕಾಣುತ್ತಿದೆ. ಇದುವರೆಗೂ ಸರಕಾರದ ಉನ್ನತ ಶಿಕ್ಷಣ ಸಂಸ್ಥೆಗಳು ನೀಡುತ್ತಿದ್ದ ಕೃಷಿ ಶಿಕ್ಷಣವನ್ನು ನೀಡುವ ಕಾಲೇಜುಗಳನ್ನು ಪ್ರಾರಂಭಿಸಲು ಖಾಸಗಿ ಕ್ಯಾಪಿಟೇಶನ್ ಕುಳಗಳಿಗೆ ಅನುಮತಿ ನೀಡುವಬಗ್ಗೆ ಚಿಂತನೆ ನಡೆಸುತ್ತಿದೆ. ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣ ಈಗಾಗಲೆ ಬಡವರ ಕೈಗೆಟುಕದಷ್ಟು ದುಬಾರಿಯಾಗಿರುವಾಗ ಬಹುತೇಕ ಗ್ರಾಮೀಣ ಭಾಗದ ರೈತರ ಮಕ್ಕಳು ಕಡಿಮೆವೆಚ್ಚದಲ್ಲಿ ಪಡೆಯುತ್ತಿದ್ದ ಕೃಷಿಸಂಬಂದಿತ ಶಿಕ್ಷಣವೂ ಈಗ ಅದೇ ಸಾಲಿಗೆ ಸೇರುವತ್ತ ಸಾಗಿದೆ.